ದೇಶದ ಎಲ್ಲ ಭಾಗಗಳಲ್ಲೂ ಇಂದು ಸ್ವಾತಂತ್ರ್ಯದ ಸಂಭ್ರಮ ಮುಗಿಲುಮುಟ್ಟಿದೆ. ತ್ರಿವರ್ಣ ಧ್ವಜವನ್ನು ಮುಗಿಲೆತ್ತರಕ್ಕೆ ಹಾರಿಸಿ ದೇಶದ ಜನತೆ ತಮ್ಮ ಸ್ವಾತಂತ್ರ್ಯ ಪ್ರೇಮ, ದೇಶಭಕ್ತಿಯನ್ನು ಮೆರೆಯುತ್ತಿದ್ದಾರೆ. ಈ ಶುಭ ಸಂಭ್ರಮದಲ್ಲಿ ಬೆಂಗಳೂರಿನ ತ್ಯಾಗರಾಜನಗರದಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಕಚೇರಿಯಲ್ಲೂ 79ನೇ ಸ್ವಾತಂತ್ರ್ಯೂತ್ಸವವನ್ನು ಸರಳ, ಸುಂದರವಾಗಿ ಭಕ್ತಿಭಾವದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಬ್ರಾಹ್ಮಣ ಮಹಾಸಭಾದ ನೂತನ ಅಧ್ಯಕ್ಷರಾದ ಶ್ರೀ ಎಸ್. ರಘುನಾಥ್ ಅವರು ಧ್ವಜಾರೋಹಣ ನೆರವೇರಿಸಿದರು.
ತದನಂತರ ರಘುನಾಥ್ ಅವರು ಬ್ರಾಹ್ಮಣ ಸಮುದಾಯವನ್ನು ಉದ್ದೇಶಿಸಿ ಸಂದರ್ಭೋಚಿತವಾಗಿ ಭಾಷಣ ಮಾಡಿದರು. ಉಪಾಧ್ಯಕ್ಷರಾದ ಶ್ರೀ ಆರ್. ಲಕ್ಷ್ಮಿಕಾಂತ್ ಸಹ ಉಪಸ್ಥಿತರಿದ್ದರು. ಇದೇ ವೇಳೆ ಬ್ರಾಹ್ಮಣ ಮಹಾಸಭಾದ ಆಡಳಿತ ಮಂಡಳಿಯ ನೂತನ ಪದಾಧಿಕಾರಿಗಳು ಹಾಜರಿದ್ದು, ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಧ್ವಜಾರೋಹಣ ಆಚರಣೆಯಲ್ಲಿ ಕಚೇರಿಯ ಎಲ್ಲ ಸಿಬ್ಬಂದಿ ಉತ್ಸಾಹದಿಂದ ತಮ್ಮನ್ನು ತೊಡಗಿಸಿಕೊಂಡಿದ್ದರು.
(Akhila Karnataka Brahmana Mahasabha celebrates 79th Independence day in Bengaluru)